ಮಂಗಳೂರು,ನ.12 : ಶ್ರೀರಾಮ ಸೇನೆ ಮಂಗಳೂರು ವತಿಯಿಂದ 21ನೇ ವರ್ಷದ ದತ್ತಮಾಲಾ ಅಭಿಯಾನದ ಪ್ರಯುಕ್ತ 6ನೇ ವರ್ಷದ ದತ್ತ ದೀಪೋತ್ಸವ ಪಿವಿಎಸ್ ಸಮೀಪದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನ.07,ಗುರುವಾರ ನಡೆಯಿತು.
ಶ್ರೀ ಕ್ಷೇತ್ರ ಗಾಣಗಾಪುರದ ಶ್ರೀ ವಿವೇಕ ಚಿಂತಾಮಣಿ ಮಹಾರಾಜರು ದತ್ತ ದೀಪೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಪ್ತ ಮಾತೆಯರಿಂದ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಲಾಯಿತು. ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾವ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಮಾತನಾಡಿ, ಸಮಾಜದ ಶ್ರೇಯಸ್ಸಿಗಾಗಿ ಶ್ರೀರಾಮ ಸೇನೆ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಶ್ರೀರಾಮ ಸೇನೆಯ ಕಾರ್ಯಕರ್ತರ ಸೇವೆಯ ಮೂಲಕ ದತ್ತ ಭಕ್ತರ ತಂಡ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. 32 ಜನರಿಂದ ಆರಂಭವಾದ ದತ್ತ ದೀಪೋತ್ಸವ ಇದೀಗ 6ನೇ ವರ್ಷದಲ್ಲಿ ನೂರಾರು ಮಂದಿಯ ಪಾಲ್ಗೊಳ್ಳುವಿಕೆಯ ಮೂಲಕ ಯಶಸ್ಸು ಕಂಡಿದೆ ಎಂದರು.
ಪ್ರಮುಖರಾದ ಪುರುಷೋತ್ತಮ ಪಾವಂಜೆ, ಶ್ರೀರಾಮ ಸೇನೆ ವಿಭಾಗ ಅಧ್ಯಕ್ಷ ಮಧುಸೂದನ್ ಉರ್ವಸ್ಟೋರ್, ಜಿಲ್ಲಾ ಅಧ್ಯಕ್ಷ ಅರುಣ್ ಕದ್ರಿ, ಜಿಲ್ಲಾ ಉಪಾಧ್ಯಕ್ಷ ಹರೀಶ್ ಬೊಕ್ಕಪಟ್ಟ, ಪ್ರಾಣೇಶ್ ಮತ್ತಿತರರು ಉಪಸ್ಥಿತರಿದ್ದರು.