ಮಂಗಳೂರು, ನ. 23 : ಯಂಗ್ ಬ್ರದರ್ ಸ್ಪೋರ್ಟ್ಸ್ ಕ್ಲಬ್ ಇದರ ದಿವಾಕರ್ ಪಾಂಡೇಶ್ವರ ನೇತೃತ್ವದಲ್ಲಿ ಕಳೆದ 19 ವರ್ಷಗಳಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ದೀಪೋತ್ಸವ ಪ್ರಯುಕ್ತ ನಡೆಯುವ ಪಾಂಡೇಶ್ಚರ ನೈಟ್ 2024 ಕಾರ್ಯಕ್ರಮ ಪಾಂಡೇಶ್ವರ ಅಶ್ವಥಕಟ್ಟೆ ಬಳಿ ಶುಕ್ರವಾರ ನಡೆಯಿತು.
ಪಾಂಡೇಶ್ವರ ಅಶ್ವತ್ಥಕಟ್ಟೆಯ ಬಳಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದರು.
ಸಭಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ, ವಿದ್ಯಾರ್ಥಿ ವೇತನ ಪ್ರದಾನಿಸಲಾಯಿತು. ಅಶಕ್ತ ಕುಟುಂಬಗಳಿಗೆ ಆರ್ಥಿಕ ಸಹಾಯ ಹಸ್ತಾಂತರಿಸಲಾಯಿತು. ಸಮಾಜ ಸೇವಕ ಈಶ್ವರ ಮಲ್ಪೆ ಹಾಗೂ ಪಿಡಬ್ಲೂಡಿ ಅಧಿಕಾರಿ ಮಿಥುನ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮಂಗಳೂರು ದಕ್ಷಿಣ ಅಧ್ಯಕ್ಷ ರಮೇಶ್ ಕಂಡೆಟ್ಟು, ಉದ್ಯಮಿಗಳಾದ ಅಜಿತ್ ಚೌಟ, ರಾಜೇಶ್ ಪುನಿಯ, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಕಾರ್ಯಕ್ರಮದ ರೂವಾರಿ-ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಯಂಗ್ ಬ್ರದರ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಪಾಂಡೇಶ್ವರ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ‘ಪಾಂಡೇಶ್ವರ ನೈಟ್ 2024’ ಸಂಗೀತ, ನೃತ್ಯ ಕಾರ್ಯಕ್ರಮ ನಡೆಯಿತು.