ಮಂಗಳೂರು,ನ. 26 :ಬ್ರೇಕ್ ಫೇಲ್ ನಿಂದ ನಡೆದ ರಿಕ್ಷಾ ಅಪಘಾತದಲ್ಲಿ ಚಾಲಕ ಮೃತಪಟ್ಟಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ ಆದಿತ್ಯವಾರ ನಡೆದಿದೆ.
ಮೃತರನ್ನು ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಎಂದು ಗುರುತಿಸಲಾಗಿದೆ. ರಿಕ್ಷಾ ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ಇಳಿಯುತ್ತಿದ್ದಂತೆ ರಿಕ್ಷಾದ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾದೊಳಗಿದ್ದ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.