ಬೆಳ್ತಂಗಡಿ, ಡಿ.19 : ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸ್ಟೀಫನ್(14) ಎಂದು ಗುರುತಿಸಲಾಗಿದೆ.
ಕ್ರಿಸ್ ಮಸ್ ಪ್ರಯುಕ್ತ ಗುರುವಾರ ಸಂಜೆ ಮನೆಗೆ ಸಾಂತಾಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೊದರೂ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.