ಮಂಗಳೂರು,ಡಿ.28: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಕ್ಯಾ.ಬ್ರಿ ಜೇಶ್ ಚೌಟ ನೇತೃತ್ವದ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8 ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಕ್ಯಾಪ್ಟನ್ ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ. ವೆಂಕಟೇಶ್ ಅವರು ಚಾಲನೆಯನ್ನು ನೀಡಿದರು.
8 ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆಯನ್ನು ನೀಡಿದ ಎಂ. ವೆಂಕಟೇಶ್ ಅವರು ಮಾತನಾಡಿ, ಕಂಬಳವು ತುಳುನಾಡಿನ ಸಾಂಸ್ಕೃತಿಕ ವೈಭವವಾಗಿದೆ. ನಾವೆಲ್ಲರೂ ಈ ಭವ್ಯ ತುಳುನಾಡಿನ ಸಂಸ್ಕೃತಿಯ ಭಾಗವಾಗಿದ್ದು. ತುಳುನಾಡಿನ ಮಣ್ಣಿನ ಜನಪದ ಕ್ರೀಡೆ ಕಂಬಳ ಉಚ್ಚ್ರಾಯ ಸ್ಥಿತಿಯಲ್ಲಿರುವುದು ಬಹಳ ಹೆಮ್ಮಯ ವಿಚಾರ ಎಂದು ಅವರು ಹೇಳಿದರು.
ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಚೌಟ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ಕಂಬಳವು ತುಳುನಾಡಿನ ಸಂಸ್ಕೃತಿ ಭಾಗವಾಗಿದ್ದು. ಕಂಬಳವನ್ನು ಉಳಿಸುವ ಮತ್ತು ಪರಿಚಯಿಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಂಬಳವನ್ನು ನಡೆಸುತ್ತಾ ಬಂದಿದ್ದೇವೆ. ಎಂ.ಆರ್. ಜಿ ಗ್ರೂಪ್ ನ ಸಿ.ಎಂ.ಡಿ ಪ್ರಕಾಶ್ ಶೆಟ್ಟಿ ಅವರು ವಿಶಾಲವಾದ ಜಾಗವನ್ನು ಒದಗಿಸಿ ಕಾರ್ಯಕ್ರಮ ನಡೆಸಲು ಹುರಿದುಂಬಿಸಿ, ಸಹಕಾರ ನೀಡಿದ್ದಾರೆ ಎಂದು ಹೇಳಿದರು.
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಕೆ. ಚಿತ್ತರಂಜನ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗುರುಪುರ ವಜ್ರ ದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಶ್ರೀ ಕಟೀಲು ದುರ್ಗಾ ಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಕುಲಪತಿ ಪಿ.ಎಲ್ ಧರ್ಮ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶ್ರೀ ಚಿತ್ತರಂಜನ ಬ್ರಹ್ಮಬೈದರ್ಕಳ ಗರೋಡಿ, ರಾಜಶೇಖರಾನಂದ ಸ್ವಾಮೀಜಿ,ವಜ್ರದೇಹಿ ಮಠ ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಪ್ರದೀಪ್ ಕುಮಾರ್ ಕಲ್ಕೂರ,ಧರ್ಮದರ್ಶಿ ಹರಿಕೃಷ್ಣ ಪುನರೂರು ,ಕಟೀಲ್ ಅನಂತ ಪದ್ಮನಾಭ ಆಸ್ರಣ್ಣ,ಜಯರಾಮ್ ಶೆಟ್ಟಿ, ಕಾರ್ಣಿಕ್,ಕಾರ್ಪೊರೇಟರ್ ಕಿರಣ್, ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ,ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಬ್ರಿಗೇಡಿಯರ್ ಐ.ಎಂ ರೈ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.