ವಳಚ್ಚಿಲ್,ಜ.1 : ವಳಚ್ಚಿಲ್ ನಲ್ಲಿ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ ಪರ್ಟ್ ಕಾಲೇಜು ದಿನಾಚರಣೆ ಭಾನುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮನಿಲಾದ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರ ವಿ.ಪೊನ್ನುರಾಜ್ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಅತ್ಯುತ್ತಮ ಜ್ಞಾನವನ್ನು ಸಂಪಾದನೆ ಮಾಡಬೇಕು. ಅಂಕದ ಜತೆಗೆ ಜ್ಞಾನ ಎರಡೂ ಕೂಡ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಸಹಾಯ ಮಾಡುತ್ತದೆ ಎಂದರು.
ಯೇನೆಪೊಯ ಪರಿಗಣಿತ ವಿವಿ ಕುಲಸಚಿವ ಡಾ.ಯೆನೆಪೋಯ ಅಬ್ದುಲ್ ಕುಂಞ ಮಾತನಾಡಿ, ಯಶಸ್ಸು ಸುಲಭದ ಹಾದಿಯಲ್ಲ, ಯಶಸನ್ನು ಸಂಪಾದಿಸಬೇಕಾದರೆ ಸತತ ಪರಿಶ್ರಮದ ಜತೆ ಅಚಲ ನಿರ್ಧಾರ ಇದ್ದರಷ್ಟೇ ಅವರು ಬದುಕಿನಲ್ಲಿ ಮುಂದೆ ಸಾಗುತ್ತಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿಸಿದ್ದ ಎಕ್ಸ್ ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್.ನಾಯಕ್ ಮಾತನಾಡಿ, ಎಕ್ಸ್ ಪರ್ಟ್ ಕಾಲೇಜು ದಿನಾಚರಣೆಯ ಮೂಲಕ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿದಾಗ ಇತರ ವಿದ್ಯಾರ್ಥಿಗಳು ಕೂಡ ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಐಟಿ ನಿರ್ದೇಶಕ ಅಂಕುಶ್ ಎನ್.ನಾಯಕ್, ಆರ್ಕಿಟೆಕ್ಟ್ ದೀಪಿಕಾ ಎನ್.ನಾಯಕ್, ಸಿಎ ಎಸ್. ಎಸ್.ನಾಯಕ್, ಆಡಿಟರ್ ಸಿಎ ಜಗನ್ನಾಥ್ ಕಾಮತ್,ಕೊಡಿಯಲ್ ಬೈಲ್ ಎಕ್ಸ್ ಪರ್ಟ್ ಪಿಯು ಕಾಲೇಜು ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್ ಉಪಸ್ಥಿತರಿದ್ದರು.
ಪ್ರಾಚಾರ್ಯ ಡಾ.ಎನ್.ಕೆ.ವಿಜಯನ್ ಕರಿಪ್ಪಲ್ ಸ್ವಾಗತಿಸಿ, ಉಪಪ್ರಾಚಾರ್ಯ ಸುಬ್ರಹ್ಮಣ್ಯ ಉಡುಪ ವಂದಿಸಿ. ವಿದ್ಯಾರ್ಥಿಗಳಾದ ವೈಷ್ಣವಿ ಗುರುರಾಜ್ ಹಾಗೂ ಉಜ್ವಲ್ ಬೂಂದಿಹಾಳ್ ನಿರೂಪಿಸಿದರು.