ಮಂಗಳೂರು, ಜ.4 : ಕಾವೂರು ಬಿಜಿಎಸ್ ಕಾಲೇಜಿನ ಆವರಣದಲ್ಲಿ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಹಾಗೂ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಕಾರ್ಯಕ್ರಮ ಬುಧವಾರ ನಡೆಯಿತು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಬಿಜಿಎಸ್ ಶಿಕ್ಷಣ ಸಂಸ್ಥಯಲ್ಲಿ ಆಧುನಿಕ ಶಿಕ್ಷಣದ ಜತೆ ಆಧ್ಯಾತ್ಮಿಕ ಶಿಕ್ಷಣ ನೀಡುವ ಕಾರ್ಯವಾಗುತ್ತಿದ್ದು, ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡುವ ಮಹತ್ತರ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪ್ರಸಕ್ತ ಸಮಾಜದಲ್ಲಿ ಧರ್ಮಾಧಾರಿತ ಮತ್ತು ಮೌಲ್ಯಧಾರಿತ ಶಿಕ್ಷಣದ ಕೊರತೆಯನ್ನು ನೀಗಿಸುವ ಕೆಲಸವನ್ನು ಬಿಜಿಎಸ್ ಶಿಕ್ಷಣ ಸಂಸ್ಟೆಯಿಂದ ಆಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಾವೂರು ಆದಿಚುಂಚನಗಿರಿ ಶಾಖಾ ಮಠದ ಅಧ್ಯಕ್ಷ ಡಾ.ಧರ್ಮಪಾಲನಾಥ ಸ್ವಾಮೀಜಿ,ಶಿವಲಿಂಗನಾಥ ಮಹಾಸ್ವಾಮೀಜಿ, ಬಸವಶಿವಮೂರ್ತಿ ಸ್ವಾಮೀಜಿ, ಮಾದಾರ ಚೆನ್ನಯ್ಯ ಮಹಾ ಸ್ವಾಮೀಜಿ, ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಮಾಜಿ ಶಾಸಕ ಸಂಜೀವ ಮಠಂದೂರು, ರಜತ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಪಿ.ಎಸ್. .ಪ್ರಕಾಶ್, ಬಿಜಿಎಸ್ ಶಿಕ್ಷಣ ಟ್ರಸ್ಟ್ನ ಶಿವರಾಮು, ಸಂಸ್ಥಾನದ ಮುಖ್ಯ ಆಡಳಿತಾಧಿಕಾರಿ ರಾಮೇಗೌಡ ಮತ್ತಿತರರು ಉಪಸ್ಥಿತರಿದ್ದರು.