ಉಳ್ಳಾಲ, ಜ.07 ನಾಟೆಕಲ್ ಸಮೀಪದ ತಿಬ್ಲಪದವು ಎಂಬಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದೇರಳಕಟ್ಟೆ ಮೆಡಿಕಲ್ ಮಾಲೀಕ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಮೃತರನ್ನು ದೇರಳಕಟ್ಟೆ ನಿವಾಸಿ ಜಲೀಲ್ ಎಂಬವರ ಪುತ್ರ ಹಾಜಿರಾ ಮೆಡಿಕಲ್ ಮಾಲೀಕ ಅವ್ಸಾಫ್ (25) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಅವ್ಸಾಫ್ ದೇರಳಕಟ್ಟೆ ಕಡೆಯಿಂದ ತಿಬ್ಲಪದವು ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ತಿಬ್ಲಪದವು ಡಿವೈಡರ್ ಸಮೀಪ ಲಾರಿಯೊಂದ ಹಠಾತ್ತನೆ ತಿರುಗಿದ ಪರಿಣಾಮ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವ್ಸಾಫ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.