ಮಂಗಳೂರು, ಜ.7: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಶ್ರೀ ಸಾನಿಧ್ಯ ವಸತಿ ಸಾಲು ಸಂಕೀರ್ಣ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ 2024- 25ರ ಜ್ಞಾನದೀಪ ಕಾರ್ಯಕ್ರಮದ ಉದ್ಘಾಟನೆವನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮಂಗಳವಾರ ಉದ್ಘಾಟಿಸಿದರು.
ವಸತಿ ಸಾಲು ಸಂಕೀರ್ಣವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿಮಾತನಾಡಿದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು, ಧಾರ್ಮಿಕ ಸಂಸ್ಥೆಗಳು ಸಮಾನತೆಯ ಕೇಂದ್ರಗಳಾಗಿದ್ದು,ದೇವರ ಮುಂದೆ ಯಾವ ವ್ಯಕ್ತಿ ಮೇಲಲ್ಲ ಹೀಗಾಗಿ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು ಎನ್ನುವ ತತ್ವ ಪಾಲಿಸಬೇಕು ಧಾರ್ಮಿಕ ಕೇಂದ್ರಗಳ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರ ಗಳ ಅಭಿವೃದ್ಧಿ ಕೊಡುಗೆ ನೀಡುತ್ತಿದೆ. ಜೊತೆಗೆ ಧಾರ್ಮಿಕ ಕೇಂದ್ರಗಳು ಪ್ರಾಚೀನ ನಮ್ಮ ಪರಂಪರೆಯನ್ನು ಉಳಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಜನರೊಂದಿಗೆ ಉತ್ತಮ ಮಾತುಕತೆ ನಡೆಸಬೇಕು. ದೇಶದ ವೈವಿಧ್ಯತೆ ಯ ಸಂಸ್ಕೃತಿಯನ್ನು ಉಳಿಸಿಕೊಂಡು ದೇಶದ ಸೌಹಾರ್ದ ತೆಯನ್ನು ಕಾಪಾಡಿಕೊಂಡು ವಿಶ್ವ ಭ್ರಾತೃತ್ವವನ್ನು ತೋರಿಸಬೇಕಾಗಿದೆ ಎಂದರು.
ಸಮಾರಂಭದಲ್ಲಿ ಸಂಸದ ಬ್ರಿಜೇಶ್ ಚೌಟ, ಡಾ.ಸುದೇಶ ಧನಕರ್, ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರ ಕುಮಾರ್, ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ , ಹೇಮಾವತಿ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶನ ಅನಿಲ್ ಕುಮಾರ್ ಎಸ್ ಎಸ್ ಮೊದಲಾದವರು ಉಪಸ್ಥಿತರಿದ್ದರು.