ಕಾಸರಗೋಡು, ಜ.12 : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಶನಿವಾರ ಕುಂಬಳೆಯಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಎಂದು ಗುರುತಿಸಲಾಗಿದೆ.
ಮಗು ಅನಾಸ್ ಶನಿವಾರ ಸಂಜೆ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆಲಾಗಿದೆ. ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು. ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಗು ಮೃತಪಟ್ಟಿದೆ ಎನ್ನಲಾಗಿದ .