ಮಂಗಳೂರು,ಜ.23 : ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಅಮೃತಾ ಆಸ್ಪತ್ರೆ ,ಕೊಚ್ಚಿ ಇವರಿಂದ ಮಂಗಳೂರಿನಲ್ಲಿ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು.
ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಮಂಗಳೂರಿನ ಅಮ್ಮನವರ ಭಕ್ತರು ಮತ್ತು ಸೇವಾಸಮಿತಿಗಳ ಸಹಯೋಗದೊಂದಿಗೆ ಜರುಗಿದ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರದಲ್ಲಿ ಕರ್ನಾಟಕದಾದ್ಯಂತ ಹಾಗೂ ಹೊರರಾಜ್ಯಗಳ ಜನರು ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬಂದು ಭಾಗವಹಿಸಿ ಪ್ರಯೋಜನ ಪಡೆದರು.
ಶಿಬಿರದಲ್ಲಿ ಜನ್ಮಜಾತ ಹೃದ್ರೋಗವಿದ್ದು ಶಸ್ತ್ರ ಚಿಕಿತ್ಸೆ ಅಗತ್ಯವುಳ್ಳ ಮತ್ತು ಇತರ ಗಂಭೀರ ಪರಿಸ್ಥಿತಿ ಗಳೊಂದಿಗೆ ಗುರುತಿಸಲ್ಲಟ್ಟ ಮಕ್ಕಳಿಗೆ ಕೊಚ್ಚಿಯ ಅಮೃತಾ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಗಳನ್ನು ನೀಡುವ ಭರವಸೆ ನೀಡಲಾಯಿತು.400 ಕ್ಕೂ ಅಧಿಕ ಮಕ್ಕಳು ಈ ಶಿಬಿರದ ಪ್ರಯೋಜನ ಪಡೆಲಿದ್ದಾರೆ. 18 ವರ್ಷದೊಳಗಿನ ಮಕ್ಕಳ ತಪಾಸಣೆಯನ್ನು ಕೊಚ್ಚಿಯ ಅಮೃತಾ ಆಸ್ಪತ್ರೆಯ ಪೀಡಿಯಾಟ್ರಿಕ್ ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಬ್ರಿಜೇಶ್ ಪಿ ಕೆ ನೇತೃತ್ವದ ಮಕ್ಕಳ ಹೃದಯ ರೋಗ ತಂಡವು ನಡೆಸಿತು.
ಮಾತಾ ಅಮೃತಾನಂದಮಯಿ ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಜ್ಯೋತಿ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರ ದಲ್ಲಿ ವಿಧಾನ ಪರಿಷತ್ ಸದಸ್ಯ ಶೀ ಐವನ್ ಡಿ’ಸೋಜ ಮಾತನಾಡಿ, ಅಮ್ಮನವರು ಮಾಡುತ್ತಿರುವ ಈ ಸಾರ್ವಜನಿಕ ಸೇವೆಯು ಅತ್ಯಂತ ಉತ್ತಮವಾದುದು.ನಾವೆಲ್ಲರೂ ನಮ್ಮ ಜೀವನದಲ್ಲಿ ದೇವರು ಮೆಚ್ಚುವಂತಹ ಕೆಲಸಗಳನ್ನು ಮಾಡಿ ಮತ್ತೊಬ್ಬರ ಕಷ್ಟದಲ್ಲಿ ಭಾಗಿಗಳಾಗಬೇಕು ಎಂದರು.
ಮಂಗಳೂರು ದಕ್ಷಿಣ ವಿಧಾನಸಭಾ ಸದಸ್ಯರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ, ನನ್ನ ಕ್ಷೇತ್ರದಲ್ಲಿ ಇಂತಹ ವಿನೂತನ ಕಾರ್ಯಕ್ರಮ ನಡೆಯುತ್ತಿರುವುದು ನನಗೆ ಹೆಮ್ಮೆಯ. ಇಂತಹ ಮಾನವೀಯ ಸೇವಾಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸುತ್ತಿರುವ ಉತ್ತಮವಾದ ಕಾರ್ಯ ಎಂದರು.
ಕಾರ್ಯಕ್ರಮದಲ್ಲಿ ಮೇಯರ್ ಮನೋಜ್ ಕುಮಾರ್, ಗೌರವಾಧ್ಯಕ್ಷರುಗಳಾದ ಪ್ರಸಾದ್ ರಾಜ್ ಕಾಂಚನ್, ಡಾ.ವಸಂತ ಕುಮಾರ್ ಪೆರ್ಲ ಉಪಸ್ಥಿತರಿದ್ದರು.