ಬಂಟ್ವಾಳ, ಫೆ.08 : ಫ್ಯಾನ್ ರಿಪೇರಿ ಮಾಡುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ ನಡೆದಿದೆ. ಮೃತರನ್ನುಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಎಂದು ಗುರುತಿಸಲಾಗಿದೆ.
ಮಾರ್ನಬೈಲು ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ರಾಜೇಶ್ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.