ಮಂಗಳೂರು, ಫೆ.27 : ಇತಿಹಾಸ ಪ್ರಸಿದ್ಧ ಕಾವೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಮಾರ್ಚ್ 6ರಂದು ಬೆಳಗ್ಗೆ 11 ಗಂಟೆ ಯಿಂದ 12ರವರೆಗೆ ನವೀಕೃತ ಗರ್ಭಗೃಹದಲ್ಲಿ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಮಾರ್ಚ್ 9ರಂದು ಬೆಳಗ್ಗೆ 8:10ರಿಂದ 8:40ರ ಮೀನಲಗ್ನ ಸುಮುಹೂರ್ತದಲ್ಲಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕವು ಜರುಗಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಮಾರ್ಚ್ 1ರ ಶನಿವಾರದಿಂದ ಮೊದಲ್ಗೊಂಡು ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮ ಹಾಗೂ ಮಾರ್ಚ್ 9ರ ವರೆಗೆ ನಡೆಯುವ ಶ್ರೀ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಹಾಕಲಾಶಾಭಿಶೇಕಕ್ಕೆ ಭಕ್ತಭಿಮಾನಿಗಳು ತ್ರಿಕರಣಪೂರ್ವಕವಾಗಿ ಸಹಕರಿಸಬೇಕು ಎಂದು ಹೇಳಿದರು.
ಹೊರೆಕಾಣಿಕೆ ಸಮಿತಿ ಸಂಚಾಲಕ ರಮಾನಂದ ಭಂಡಾರಿ ಮಾತಾಡಿ, ಮಾರ್ಚ್ 1ರಂದು ಕೂಳೂರು, ಪಡುಕೋಡಿ, ಶಾಂತಿನಗರ, ಗಾಂಧಿನಗರ, ಅತ್ರಬೈಲು, ಕುಂಜತ್ತಬೈಲು, ಮರಕಡ, ಕಾವೂರು, ಪಡುಶೆಡ್ಡೆಜಾರ, ಬೋಂದೇಲ್, ಪಚ್ಚನಾಡಿ, ಪದವಿನಂಗಡಿ, ಮೇರಿಹಿಲ್, ಕೊಂಚಾಡಿ, ಮುಗ್ರೋಡಿ ಹಾಗೂ ಮಾರ್ಚ್ 2ರಂದು ಸಂಜೆ 4 ಗಂಟೆಗೆ ಕೆಎಚ್ ಬಿ ಕಾಲೋನಿ ಹಾಗೂ ಬೋಂದೆಲ್ ನಿಂದ ಹೊರೆಕಾಣಿಕೆ ಮೆರವಣಿಗೆ ಹೊರಡಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ್ ಭಟ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ, ಆಶಿಕ್ ಕುಮಾರ್ ಬಳ್ಳಾಲ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಪ್ರಭು, ಅವಿನಾಶ್ ನಾಯ್ಕ್ ಪಂಜಿಮೊಗರುಗುತ್ತು, ದೀಪಕ್ ಪೂಜಾರಿ, ಕಿಶೋರ್ ಕುಮಾರ್, ಹರೀಶ್ ಶೆಟ್ಟಿ, ಸದಾಶಿವ, ಗಿರಿಜಾ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.