ಮಂಗಳೂರು,ಮಾ.05 : ‘ಶಿವಾಜಿ’ ತುಳು ನಾಟಕ ಕಟೀಲು ಕ್ಷೇತ್ರದಲ್ಲಿ ಇದೇ 6 ರಂದು ಪ್ರಥಮ ಬಾರಿ ಪ್ರದರ್ಶನಗೊಳ್ಳಲಿದೆ. ತಾ. 13 ರಂದು ಪುರಭವನದಲ್ಲಿ ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಿವಾಜಿ ತುಳು ನಾಟಕದ ಶೀರ್ಷಿಕೆ ಗೀತೆ ಕನ್ನಡದಲ್ಲಿದೆ. ಸಂಭಾಷಣೆ ತುಳುವಿನಲ್ಲಿ ಇದೆ. ಅಲ್ಲಲ್ಲಿ ಹಿಂದಿ ಭಾಷೆಯನ್ನು ಬಳಸಿದ್ದೇವೆ. ಒಟ್ಟು 3 ಹಾಡುಗಳಿದ್ದು, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಿರಾಜ್ ಕಾವೂರು ಕಥೆ ರಚಿಸಿದ್ದಾರೆ ಎಂದು ಹೇಳಿದರು.
ಪ್ರಮೋದ್ ಮರವಂತೆ, ಶಶಿರಾಜ್ ಕಾವೂರು ಸಾಹಿತ್ಯ ಬರೆದಿದ್ದಾರೆ. ಶಿವಾಜಿ ಪಾತ್ರಕ್ಕೆ ನಟ ಪೃಥ್ವಿ ಅಂಬರ್, ಗುರು ದಾದಾಜಿ ಪಾತ್ರಕ್ಕೆ ನವೀನ್ ಡಿ.ಪಡೀಲ್ ಧ್ವನಿ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ದೇವದಾಸ್ ಕಾಪಿಕಾಡ್ ಅವರು ಹಾಡುಗಳನ್ನು ಹಾಡಿದ್ದಾರೆ. ಶಿವದೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಪ್ರೀತೇಶ್ ಬಳ್ಳಾಲ್ಬಾಗ್ ಶಿವಾಜಿ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎ.ಕೆ. ವಿಜಯ್, ಮಣಿಕಾಂತ್ ಕದ್ರಿ, ಶಶಿರಾಜ್ ಕಾವೂರು, ಪ್ರೀತೇಶ್ ಬಳ್ಳಾಲ್ಬಾಗ್ ಉಪಸ್ಥಿತರಿದ್ದರು.