ಮಂಗಳೂರು, ಮಾ. 07 : ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ‘ವೈಲ್ಡ್ ಲೈಫ್ ಸಫಾರಿ’ ಹಿಂದಿ ಮತ್ತು ಕನ್ನಡ ಚಿತ್ರದ ಮೂಹೂರ್ತ ಸಮಾರಂಭ ಶುಕ್ರವಾರ ನಡೆಯಿತು.
ವಿ.ಕೆ. ಪಿಲಂ ಸ್ ರವರ ತನ್ನ ಎರಡನೇ ಪ್ರಾಜೆಕ್ಟ್ ‘ವೈಲ್ಡ್ ಟೈಗರ್ ಸಫಾರಿ’ ಚಲನಚಿತ್ರವನ್ನು ಘೋಷಿಸಿದೆ. ಈ ಸಂಸ್ಥೆಯ ಮೊದಲ ಚಿತ್ರ”ಕರಾವಳಿ” ಆಗಿದ್ದು, ಈ ಹೊಸ ಸಿನಿಮಾ ವಿನೋದ್ ಕುಮಾರ್ ಅವರ ಪ್ರೊಡಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿದೆ.
ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದ್ದು ಶೀಘ್ರದಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂದರು.
ನಾಯಕ ನಟ ಶಿಥಿಲ್ ಕುಮಾರ್ ಅವರು ಮಾತಾಡಿ, ಲವ್, ಆಕ್ಷನ್ ಸಿನಿಮಾ ಇದಾಗಿದೆ. ಕಥೆ ಕೇಳಿ ಥ್ರಿಲ್ ಆಗಿದ್ದೇನೆ ಎಂದರು.
ರಾಜೇಶ್ ಭಟ್ ಸಿನಿಮಾಕ್ಕೆ ಕೆಮರಾ ಕ್ಲಾಫ್ ಮಾಡಿದರು.ಸಮಾರಂಭದಲ್ಲಿ ಸಿನಿಮಾ ನಿರ್ಮಾಪಕ ವಿನೋದ್ ಕುಮಾರ್, ನಾಯಕಿ ನಿಮಿಕಾ ರತ್ನಾಕರ್, ಬಾಲಿವುಡ್ ನ ನೃತ್ಯ ನಿರ್ದೇಶಕರಾದ ಧರ್ಮೇಶ್, ಸುಶಾಂತ್, ಕೆಮರಾಮ್ಯಾನ್ ಎಜೆ ಶೆಟ್ಟಿ, ಕಲಾ ನಿರ್ದೇಶಕ ಶಿವು, ದೇವಳದ ಮೆನೇಜರ್ ಜಗದೀಶ್ ಕದ್ರಿ, ಕಿಶೋರ್ ಕುಮಾರ್, ರತ್ನಾಕರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.