ಮಂಗಳೂರು,ಮಾ.20 : ದ.ಕ. ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟವು ಬುಧವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.
ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ರೀಡಾಪಟುವನ್ನಾಗಿ ಮಾಡುವುದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಬಹಳಷ್ಟಿದೆ ಎಂದರು.
ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟಾನಿ ಅಲ್ವಾರೀಸ್ ಧ್ವಜಾರೋಹಣಗೈದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಕ್ರೀಡಾ ಜ್ಯೋತಿ ಯನ್ನು ಹಸ್ತಾಂತರಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಜಿಲ್ಲಾ ಸಂಘದ ಕಾರ್ಯಾಧ್ಯಕ್ಷ ಮಾಮುಚ್ಚನ್ ಎಂ., ಪಪೂ ದೈಹಿಕ ಶಿಕ್ಷಣ ವಿಭಾಗದ ಜಿಲ್ಲಾಧ್ಯಕ್ಷ ಪ್ರೇಮ ನಾಥ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಚಕ್ರಪಾಣಿ, ಶಿವಪ್ರಸಾದ್, ಭರತ್, ನವೀನ್ ಪುತ್ರನ್, ಸಂಘದ ಪದಾಧಿಕಾರಿಗಳಾದ ಶಿವಾನಂದ ಕೈಕಿಣಿ ಕರುಣಾಕರ್, ಜಯರಾಜ್ ಜೈನ್, ಬಾಲಕೃಷ್ಣ ಕಡಬ, ಶೇಖರ್ ಕಡ್ತಲ, ರವಿರಾಜ್,ರಾಜೇಂದ್ರ ರೈ ಬಂಟ್ವಾಳ, ಕೃಷ್ಣಯ್ಯ ಉಪಸ್ಥಿತರಿದ್ದರು.