ಮಂಗಳೂರು, ಮಾ.24 ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಎ. 18 ರಿಂದ ಎ. 21 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ, ಭಜನೋತ್ಸವ ಮತ್ತು ಜಾರಂದಾಯ ನೇಮ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದ ವಠಾರದಲ್ಲಿ ಜರಗಿತು.
ಚಿತ್ರಾಪುರ ಮಠದ ಶ್ರೀ ವಿದೇಂದ್ರ ತೀರ್ಥ ಶ್ರೀಪಾದರು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ, ದೇವಸ್ಥಾನದಲ್ಲಿ ಎ. 18 ರಿಂದ ಎ. 21 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಉತ್ತಮವಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಶಾಸಕ ಡಾ| ವೈ ಭರತ್ ಶೆಟ್ಟಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿ, ದೇವಸ್ಥಾನಗಳು ಹಿಂದೂ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವ ಕೇಂದ್ರವಾಗಿ ಬೆಳೆಯಬೇಕು ಎಂದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ ಅವರು ಮಾತನಾಡಿ, ಕ್ಷೇತ್ರದಲ್ಲಿ ನಡೆಯುವ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಕ್ತರ ಅಪೇಕ್ಷೆಯಂತೆ ಬ್ರಹ್ಮರಥ ಕೆಲಸ ಅಂತಿಮ ಹಂತದಲ್ಲಿದ್ದು ಬ್ರಹ್ಮಕಲಶೋತ್ಸವ ಸಂದರ್ಭ ಸಮರ್ಪಿಸಲಾಗುವುದು ಎಂದರು.
ದೇವಸ್ಥಾನದ ತಂತ್ರಿವರೇಣ್ಯರಾದ ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ, ಅರ್ಚಕರಾದ ಸುನೀಲ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕಪರಿಷತ್ ಸದಸ್ಯರಾದ ಸುಬ್ರಹ್ಮಣ್ಯ ಪ್ರಸಾದ್ ಕೊರ್ಯಾರು,ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್, ಬ್ರಹ್ಮಕಲೋತ್ಸವ ಸಮಿತಿಯ ಅಧ್ಯಕ್ಷ ಯಾದವ ಕೋಟ್ಯಾನ್, ಕಾರ್ಯಾಧ್ಯಕ್ಷ ಪ್ರಶಾಂತ್ ಮುಡಾಯಿಕೊಡಿ, ಪ್ರಧಾನ ಕಾರ್ಯದರ್ಶಿ ಸದಾಶಿವ ಐತಾಳ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸುಕುಮಾರ್ ಭಂಡಾರಿ, ಎ. ವಾದಿರಾಜ ಜಿ.ಕೆ.ಸುಂದರ್, ದಯಾನಂದ, ಹೊನ್ನಯ್ಯ ಕೋಟ್ಯಾನ್, ಅನುರಾಧ, ಹೇಮಾವತಿ ಉಪಸ್ಥಿತರಿದ್ದರು.