ಮಂಗಳೂರು, ಮಾ.25: ರೋಹನ್ ಕಾರ್ಪೊರೇಷನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಶಿಲಾನ್ಯಾಸ ಕಾರ್ಯಕ್ರಮವು ಸೋಮವಾರ ನಗರದ ಅತ್ತಾವರ-ಬಾಬುಗುಡ್ಡದಲ್ಲಿ ನಡೆಯಿತು.
ಮಿಲಾಗ್ರಿಸ್ ಚರ್ಚ್ನ ಧರ್ಮಗುರು ರೆ.ಫಾ. ಬೊನೆವೆಂಚರ್ ನಝ್ರತ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ಐವನ್ ಡಿಸೋಜ, ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ರೋಹನ್ ಕಾರ್ಪೊರೇಷನ್ನ ಅಧ್ಯಕ್ಷ ರೋಹನ್ ಮೊಂತೆರೋ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.