ಮಂಗಳೂರು, ಏ.11 : ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ‘ಕುಲಾಲ ಪರ್ಬ’ ಕಾರ್ಯಕ್ರಮ ಏ.13 ರಂದು ಮಧ್ಯಾಹ್ನ 2 ಗಂಟೆಯಿಂದ ಉರ್ವಸ್ಟೋರ್ ಬಳಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಆಡಳಿತ ಟ್ರಸ್ಟಿ ಬಿ. ಸುರೇಶ್ ಕುಲಾಲ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 2 ಗಂಟೆಗೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಗಳಾಗಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಪ್ರಧಾನ ಅರ್ಚಕ ಶಿವಾನಂದ ಕನ್ನಡ, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಾಜಿ ಅಧ್ಯಕ್ಷ ಎಂ.ಪಿ. ಬಂಗೇರ, ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಮಮತಾ ಅಣ್ಣಯ್ಯ ಕುಲಾಲ್, ಓಲ್ಡ್ ಕೆಂಟ್ ರಸ್ತೆ ಶ್ರೀ ದೇವಿ ದೇವಸ್ಥಾನ ಅಧ್ಯಕ್ಷ ಸದಾಶಿವ ಕುಲಾಲ್ ಅತ್ತಾವರ, ನ್ಯಾಯವಾದಿ ರಾಮ್ ಪ್ರಸಾದ್ ಎಸ್., ಕುಲಾಲ ಕುಂಬಾರರ ಯುವ ವೇದಿಕೆ ರಾಜ್ಯಾಧ್ಯಕ್ಷ ಗ೦ಗಾಧರ ಬಂಜನ್, ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಸ್ವರ್ಣಕುಂಭ ವಿ.ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್, ಕುಂಭ ನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಾರ್ಯಾಧ್ಯಕ್ಷ ಕುಶ ಆರ್. ಮೂಲ್ಯ, ಶ್ರೀ ವೀರನಾರಾಯಣ ಸೇವಾ ಸಮಿತಿ ಅಧ್ಯಕ್ಷ ಕಿರಣ್ ಅಟ್ಟೂರು ಭಾಗವಹಿಸಲಿದ್ದಾರೆ ಎಂದರು.
ಬಿ. ಪ್ರೇಮಾನಂದ ಕುಲಾಲ್ ಅವರು ಮಾತನಾಡಿ, 2.30 ರಿಂದ ನೃತ್ಯ ಸಂಗೀತ ಸಮ್ಮಾನ ಪಡೆಯಲಿದೆ, ಲಾಲ ಸಮುದಾಯದ 25 ಸಾಧಕರಿಗೆ ಕುಲಾಲ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ರೇಕಿ ಗುರು ವಿಜಯ ಸುವರ್ಣ ಮಾದುಕೋರಿ ಉಪಸ್ಥಿತಿ ಇರಲಿದೆ. ಸುನಿಲ್ ಸಾಲ್ಯಾನ್ ಮತ್ತು ದೇವಕಿ ಸಾಲ್ಯಾನ್ ಅವರಿಗೆ ಗೌರವ ಅಭಿನಂದನೆ ನಡೆಯಲಿದೆ. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕುಲಾಲ್ ಮಂಗಳಾದೇವಿ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪ್ರಮುಖರಾದ ಐಕಳ ಹರೀಶ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ, ಶಶಿಧರ ಶೆಟ್ಟಿ ಬರೋಡ, ಕರ್ನಿರೆ ವಿಶ್ವನಾಥ ಶೆಟ್ಟಿ, ವಿ. ಕರುಣಾಕರಣೆ, ಮೋಹನ ಪೂಜಾರಿ, ಮಯೂರ್ ಉಳ್ಳಾಲ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ , ಟ್ರಸ್ಟಿಗಳಾದ ಬಿ. ನಾಗೇಶ್ ಕುಲಾಲ್, ಬಿ. ದಿನೇಶ್ ಕುಲಾಲ್ ಉಪಸ್ಥಿತರಿದ್ದರು.