ಪುತ್ತೂರು, ಎ. 22 ;ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಬ್ರಹ್ಮ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮರಥೋತ್ಸವದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಶಾಸಕ ಅಶೋಕ್ ಕುಮಾರ್ ರೈ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು.
ಏ.17ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ಉತ್ಸವ, ವಸಂತ ಕಟ್ಟೆಪೂಜೆ, ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.ಸಂಜೆ ದೇವರು ಒಳಾಂಗಣದಿಂದ ಹೊರಾಂಗಣಕ್ಕೆ ಪ್ರವೇಶ ಮಾಡಿದರು.ಬಳಿಕ ಶ್ರೀ ದೇವರ ಉತ್ಸವದ ಬಳಿಕ ಕಂಡನಾಯಕ ಕಟ್ಟೆಯಲ್ಲಿ ಕಟ್ಟೆ ಪೂಜೆ ನಡೆಯಿತು.ಬಳಿಕ ಶ್ರೀ ದೇವರಿಗೆ ವಾದ್ಯ, ಬ್ಯಾಂಡ್ ಸೇವೆ ನಡೆಯಿತು.ಆದಾದ ಬಳಿಕ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಹೊರಾಂಗಣ ಪ್ರವೇಶವಾಯಿತು.ಈ ಸಂದರ್ಭ ಶ್ರೀ ದೇವರ ಮತ್ತು ಉಳ್ಳಾಲ್ತಿ ಅಮ್ಮನವರ ಉತ್ಸವ ನಡೆಯಿತು.ಅಲ್ಲಿಂದ ರಾಜಾಂಗಣದಿಂದ ಶ್ರೀ ದೇವರು ಉಳ್ಳಾಲ್ತಿ ದೈವಗಳ ಭಂಡಾರದ ಜೊತೆ ಅಲಂಕೃತಗೊಂಡ ಭವ್ಯ ಬ್ರಹ್ಮರಥದ ಬಳಿ ತೆರಳಿದರು. ಅಲ್ಲಿ ಬ್ರಹ್ಮರಥಕ್ಕೆ ಒಂದು ಸುತ್ತು ಬಂದ ಶ್ರೀ ದೇವರು ಬ್ರಹ್ಮರಥದ ಬಳಿ ಕಾಜುಕುಜುಂಬ ದೈವದ ನುಡಿಗಟ್ಟು ನಡೆಯಿತು.ರಾತ್ರಿ 11.28 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು.
ಬ್ರಹ್ಮರಥೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ,ದ. ಕ.ಸಂಸದ ಕ್ಯಾಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ವಿನಯ ಸುವರ್ಣ, ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ.ವಿ. ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೆಡೇಕರ್, ಕಾರ್ಯನಿರ್ವಹಕಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ಮಾಜಿ ಆಡಳಿತ ಮೊತ್ತೇಸರ ಎನ್.ಕೆ.ಜಗನ್ನಿವಾಸ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಮಾಜಿ ಸದಸ್ಯ ಎನ್. ಕರುಣಾಕರ ರೈ ದೇರ್ಲ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸಹಿತ ಹಲವಾರು ಮಂದಿ ತೆಂಗಿನ ಕಾಯಿ ಒಡೆದರು. ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಆಡಳಿತಾಧಿಕಾರಿ ದೇವಪ್ಪಪಿ.ಆರ್.,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತೀಶ್ ಗೌಡ ಒಳಗುಡ್ಡ, ವೆಂಕಟಕೃಷ್ಣ ಪಾಲೆಚ್ಚಾರು,ನವೀನ್ ಕರ್ಕೇರ,ನಾರಾಯಣ ಗೌಡ ಕುಕ್ಕುತ್ತಡಿ, ವಾಸುದೇವ ನಾಯ್ಕ, ಸತೀಶ್ ನಾಯ್ಕ, ಪ್ರಮೀಳಾ ಚಂದ್ರಶೇಖರ ಗೌಡ, ಲಲಿತಾಶಂಕರ ಪಾಟಾಳಿ, ಅರ್ಚಕ ರವಿಚಂದ್ರ ನೆಲ್ಲಿತ್ತಾಯ, ನಿಕಟಪೂರ್ವ ಅಧ್ಯಕ್ಷ ಮಾಧವ ಗೌಡ ಕಾಂತಿಲ,ಮಾಜಿ ಅಧ್ಯಕ್ಷತಿಮ್ಮಪ್ಪಗೌಡ, ಚನಿಲ ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಬ್ರಹ್ಮರಥೋತ್ಸವದ ಮೊದಲು ಸುಡುಮದ್ದು ಪ್ರದರ್ಶನ ‘ಪುತ್ತೂರು ಬೆಡಿ’ ನಡೆಯಿತು.ಬ್ರಹ್ಮರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.