ಮಂಗಳೂರು, ಎ. 23 : ಕಾಟಿಪಳ್ಳ ಗಣೇಶಪುರ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ, ಪರಿವಾರ ದೇವರಿಗೆ ಸಹಸ್ರಕುಂಭ ಬ್ರಹ್ಮಕಲಶಾಭಿಷೇಕ ಎ. 21,ಸೋಮವಾರ ನಡೆಯಿತು.ದೇವಳದ ತಂತ್ರಿ ಬ್ರಹ್ಮಶ್ರೀ ದೇರೆಬೈಲ್ ಡಾ.ಶಿವಪ್ರಸಾದ್ ತಂತ್ರಿ ನೇತೃತ್ವ ವಹಿಸಿದ್ದರು. ಬೆಳಗ್ಗೆ ತುಲಾಭಾರ, ಮಹಾಪೂಜೆ, ಬಲಿ ಹೊರಟು ಉತ್ಸವ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷ ಯಾದವ ಕೋಟ್ಯಾನ್, ಕಾರ್ಯಾಧ್ಯಕ್ಷ ಪ್ರಶಾಂತ್ ಮೂಡಾಯಿಕೋಡಿ, ಪ್ರಧಾನ ಕಾರ್ಯದರ್ಶಿ ಪಿ. ಸದಾಶಿವ ಐತಾಳ್, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಕುಮಾರ್ ಭಂಡಾರಿ, ಎ.ವಾದಿರಾಜ, ಜಿ.ಕೆ.ಸುಂದರ್, ಪ್ರಧಾನ ಅರ್ಚಕ ಸುನಿಲ್ ಭಟ್, ದಯಾನಂದ ಹೊನ್ನಯ್ಯ ಕೋಟ್ಯಾನ್, ಅನುರಾಧ, ಹೇಮಾವತಿ, ಗೌರವಾಧ್ಯಕ್ಷರು, ಗೌರವ ಸಲಹೆಗಾರರು, ಮಹಾ ಪೋಷಕರು, ಪದಾಧಿ ಕಾರಿಗಳು, ಉಪ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಸಂಜೆ ಧಾರ್ಮಿಕ ಸಭೆ ನಡೆಯಿತು.
ಏ.22ರಂದು ಬೆಳಗ್ಗೆ ನೂತನ ಬ್ರಹ್ಮರಥ ಸಮರ್ಪಣೆ, ಬ್ರಹ್ಮರಥಾರೋಹಣ, ಹಗಲು ರಥೋತ್ಸವ, ಮಹಾ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ನಡೆಯಿತು.