ಮಂಗಳೂರು, ಎ.29 : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತಾನಾಡಿದ ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ ಅವರು, ಹದಿ ಹರೆಯದಲ್ಲೇ ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಛಲ ಮೂಡಿತು. ಹಾಗಾಗಿ ಬಡತನ ಇದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿದೆ.ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಛಲ, ಶಿಸ್ತು, ಕಠಿಣ ಪರಿಶ್ರಮ ಅಗತ್ಯ. ಎಂದು ಅವರು ಹೇಳಿದರು.
ಹಿರಿಯ ಪತ್ರಕರ್ತ ಕೇಶವ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ , ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಉಪಸ್ಥಿತರಿದ್ದರು.
ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.