ಬೆಳ್ತಂಗಡಿ, ಮೇ. 04 : ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಿಯಾರ್ ದೂರು ನೀಡಿದ್ದಾರೆ.ಪೊಲೀಸರು ಶಾಸಕರ ಭಾಷಣದ ವೀಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.