ನವದೆಹಲಿ, ಮೇ. 06 : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧ ಇಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಯ ಬಳಿಕ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಗಾಲಿ ಜನಾರ್ದನ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಮತ್ತು ಮೆಫಾಜ್ ಅಲಿ ಖಾನ್ ಸೇರಿದಂತೆ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.