ಮಂಗಳೂರು, ಮೇ. 06 : ನಮ್ಮ ಕನಸು ಬ್ಯಾನರಿನಲ್ಲಿ ಕೆ.ಸುರೇಶ್ ನಿರ್ಮಿಸಿ, ರಮೇಶ್ ಶೆಟ್ಟಿಗಾರ್ ಬರೆದು, ನಿರ್ದೇಶಕ ಸಂತೋಷ್ ಮಾಡ ನಿರ್ದೇಶಿಸಿದ ‘ಪಿದಾಯಿ ತುಳು ಚಲನ ಚಿತ್ರ ಮೇ 9ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸಂತೋಷ್ ಮಾಡ ಅವರು ಎ.26,ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಮುಖ್ಯ ಭೂಮಿಕೆಯಲ್ಲಿ ಮಹಾಮಾಯಿ ಪಾತ್ರಿಯಾಗಿ ಕನ್ನಡದ ಖ್ಯಾತ ನಟ ಶರತ್ ಲೋಹಿತಾಶ್ವ ಅಭಿನಯಿಸಿದ್ದಾರೆ. ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ, ಪುಷ್ಪರಾಜ್ ಬೋಳಾರ್, ಇಳಾ ವಿಟ್ಲ, ದೇವಿ ನಾಯರ್, ಪ್ರೀತೇಶ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ, ಹಾಗೂ ಬಾಲ ಪ್ರತಿಭೆಗಳಾದ ಮೋನಿಶ್, ತಿಷ, ನಿಹಾ, ಧ್ರುವ, ಖುಷಿ, ಡಿಬಿಸಿ ಶೇಖರ್, ಅನಿತಾ ಚಂದ್ರಶೇಖರ್ ಮತ್ತಿತ್ತರರು ಅಭಿನಯಿಸಿದ್ದಾರೆ.
ಚಿತ್ರಕ್ಕೆ ರಮೇಶ್ ಶೆಟ್ಟಿಗಾರ್ ಹಾಗೂ ಡಿ.ಬಿ.ಸಿ ಶೇಖರ್ ಸಂಭಾಷಣೆ ಬರೆದಿದ್ದಾರೆ. ಛಾಯಾಗ್ರಾಹಣವನ್ನು ಉಣ್ಣೆ ಮಾಡವೂರ್, ಸುರೇಶ್ ಅರಸ್ ಸಂಕಲನ, ಅಜಯ್ ನಂಬೂದಿರಿ ಸಂಗೀತ ನೀಡಿದ್ದು, ಡಾ.ವಿದ್ಯಾಭೂಷಣ್ ಪ್ರಥಮವಾಗಿ ಚಲನಚಿತ್ರದಲ್ಲಿ ಹಾಡಿದ್ದಾರೆ. ಹಿನ್ನಲೆ ಗಾಯಕರಾದ ಮೇಧ ವಿದ್ಯಾಭೂಷಣ್, ವಿಜೇಶ್ ಗೋಪಾಲ್ ಮುಂತಾದವರು ಕಂಠದಾನ ಮಾಡಿದ್ದಾರೆ. ದೀಪಾಂಕುರನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ದ.ಕ ಜಿಲ್ಲೆಯ ಮುಡಿಪು ಹಾಗೂ ಮಂಜೇಶ್ವರದ ಗಡಿಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪುಷ್ಪರಾಜ್ ಬೋಳಾರ್, ರವಿ ವರ್ಕಾಡಿ, ಡಿ.ಬಿ.ಸಿ ಶೇಖರ್, ಪ್ರೀತೇಶ್, ರೂಪಶ್ರೀ ವರ್ಕಾಡಿ ಉಪಸ್ಥಿತರಿದ್ದರು.