ಮಂಗಳೂರು, ಮೇ. 15: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ರಾಷ್ಟ್ರೀಯ ಸಮಿತಿಯಲ್ಲಿ ಬೇರೆ ಬೇರೆ ರಾಜ್ಯಗಳ 4 ಮಂದಿ ಸ್ಪೀಕರ್ ಮಾತ್ರ ಇರಲಿದ್ದಾರೆ. ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾದ್ದಾರೆ. ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿದ್ದಾರೆ.