ಹೈದರಾಬಾದ್, ಮೇ. 18 : ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ರವಿವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡ ಘಟನೆಯ ಬಗ್ಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಲವಾರು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.