Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    Subscribe to Updates

    Get the latest creative news from FooBar about art, design and business.

    What's Hot

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ
    Local News

    ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ

    adminBy adminMay 21, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ.21 : ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು ಇವರು ಆಯ್ಕೆಗೊಂಡಿದ್ದಾರೆ.

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕರಾಗಿರುವ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಮಂಗಳವಾರ ನಡೆದ ಒಕ್ಕೂಟದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯ ಕೆಎಂಎಫ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಯಿತು. ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ಈ ಆಯ್ಕೆ ನಡೆದಿದೆ.

    ಇತ್ತೀಚೆಗೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಡಾ..ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದ ಹೈನುಗಾರರ ಬಳಗದ 13 ಮಂದಿ ನಿರ್ದೇಶಕರು ಆಯ್ಕೆ ಗೊಂಡಿದ್ದು, ಬಳಿಕ ಡಾ.ಎಂಎನ್ ಆರ್ ಬಳಗದ ರವಿರಾಜ ಹೆಗ್ಡೆ, ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಇದೀಗ ದೇವಿಪ್ರಸಾದ್ ಶೆಟ್ಟಿಯವರು ಕೂಡ ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.

    ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬೆಂಗಳೂರು ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

    ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡ ದೇವಿಪ್ರಸಾದ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಅವರು ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಉದಯ ಎಸ್. ಕೋಟ್ಯಾನ್, ನಿರ್ದೇಶಕರುಗಳಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸುಧಾಕರ್ ಶೆಟ್ಟಿ , ಎನ್. ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ, ಸುಚರಿತ ಶೆಟ್ಟಿ, ನಂದರಾಮ್ ರೈ, ಎಸ್. ಬಿ. ಜಯರಾಮ ರೈ, ಚಂದ್ರಶೇಖರ ರಾವ್, ಮಮತಾ ಆರ್. ಶೆಟ್ಟಿ,.ಎಚ್. ಪ್ರಭಾಕರ್, ಭರತ್ ಎನ್, ಬಿ. ಸುಧಾಕರ್ ರೈ, ಸವಿತಾ ಎನ್. ಶೆಟ್ಟಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    Local News February 3, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    Film News February 2, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    Comments are closed.

    Demo
    Don't Miss
    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    ಬೆಳ್ತಂಗಡಿ,ಫೆ.07 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಫೆ.8, ಭಾನುವಾರ…

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.