ಉಳ್ಳಾಲ, ಮೇ 25: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ(54) ಎಂದು ಗುರುತಿಸಲಾಗಿದೆ.
ಮನೋಜ್ ಅವರು ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ಬೈಕಲ್ಲಿ ತೆರಳಿ, ರಾತ್ರಿ ವಾಪಸ್ ಆಗುತ್ತಿದ್ದಾಗ ವೇಳೆ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.