ಮಂಗಳೂರು, ಮೇ. 28 :ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾಗಿರುವ ಕೆ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರವು ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ ಎಂದುಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಕೂಲ್ ಲೀಡರ್ ಚಿತ್ರವು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ ಚಿತ್ರೀಕರಿಸಲಾಗಿದೆ.ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿ ಅಭಿನಯಿಸಿದ್ದಾರೆ ಎಂದರು.
ನಿರ್ಮಾಪಕರಾದ ಕೆ.ಸತ್ಯೇಂದ್ರ ಪೈ ಅವರು ಮಾತಾನಾಡಿ, ಪೆನ್ಸಿಲ್ ಬಾಕ್ಸ್ ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕ ರಝಾಕ್ ಪುತ್ತೂರು, ನಿರ್ಮಾಪಕ ಕೆ.ಸತ್ಯೇಂದ್ರ ಪೈ, ಸುದರ್ಶನ್ ಶಂಕರ್, ಹಂಚಿಕೆದಾರ ಬಾಲಕೃಷ್ಣ ಶೆಟ್ಟಿ, ಅಕ್ಷತ್ ವಿಟ್ಲ, ಮೋಹನ್ ಪಡ್ರೆ ಮತ್ತಿತರರು ಉಪಸ್ಥಿತರಿದ್ದರು.