ಬಂಟ್ವಾಳ, ಮೇ. 30 : ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಮತ್ತು ದ. ಕ. ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ.