ದೇರಳಕಟ್ಟೆ, ಮೇ. 30 : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ.
ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದ ಪರಿಣಾಮ ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.