ಮಂಗಳೂರು, ಮೇ. 30 :ಮಂಗಳೂರು ನೂತನ ಪೊಲೀಸ್ ಕಮಿಷನರ್ ರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಿ ಅವರ ಹುದ್ದೆಗೆ ಉಡುಪಿ ಜಿಲ್ಲಾ ಎಸ್ ಪಿ ಅರುಣ್ ಕೆ ಅವರನ್ನು ನೇಮಿಸಲಾಗಿದೆ. ಗುಪ್ತಚರ ವಿಭಾಗದ ಎಸ್ ಪಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಎಸ್ ಪಿ ಯಾಗಿ ನೇಮಕ ಮಾಡಲಾಗಿದೆ.