Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    September 13, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    September 12, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    Subscribe to Updates

    Get the latest creative news from FooBar about art, design and business.

    What's Hot

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    September 13, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    September 12, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಯಕ್ಷಧ್ರುವ ಪಟ್ಲ ದಶಮ ಸಂಭ್ರಮ, ರಾಷ್ಟ್ರೀಯ ಕಲಾ ಸಮ್ಮೇಳನ
    Local News

    ಯಕ್ಷಧ್ರುವ ಪಟ್ಲ ದಶಮ ಸಂಭ್ರಮ, ರಾಷ್ಟ್ರೀಯ ಕಲಾ ಸಮ್ಮೇಳನ

    adminBy adminJune 1, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜೂ. 01 :: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮ ಇಂದು ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಟೀಲು ದುರ್ಗಾಪರಮೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು.

    ಪ್ರಾಸ್ತಾವಿಕ ಮಾತನ್ನಾಡಿದ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು, ಈ ಕಾರ್ಯಕ್ರಮ ಇಷ್ಟೊಂದು ಯಶಸ್ವಿಯಾಗಿ ನಡೆಯಬೇಕಾದರೆ ಕೇಂದ್ರೀಯ ಸಮಿತಿಯ ಪ್ರತೀ ಪದಾಧಿಕಾರಿಗಳು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಶ್ರಮವಿದೆ. ಪಟ್ಲ ಫೌಂಡೇಶನ್ ದಾನಿಗಳ ನೆರವಿನಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, ನಾನು ಯಕ್ಷಧ್ರುವ ಪಟ್ಲ ಫೌಂಡೇಶನ್ ಎಲ್ಲಾ ಪದಾಧಿಕಾರಿಗಳು, ದೇಶ ವಿದೇಶದಲ್ಲಿರುವ ಘಟಕದ ಪದಾಧಿಕಾರಿಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ. ಪಾರ್ತಿಸುಬ್ಬರಿಂದ ಆರಂಭವಾದ ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ಮುಂದುವರಿಯುತ್ತಿದೆ. ಹಲವಾರು ಜನ ಯಕ್ಷಾಭಿಮಾನಿಗಳು, ದಾನಿಗಳು ಯಕ್ಷಧ್ರುವ ಪಟ್ಲ ಫೌಂಡೇಶನ್ ಫೌಂಡೇಶನ್ ಬೆಳೆಯಲು ಕಾರಣರಾಗಿದ್ದಾರೆ. ಯಕ್ಷಗಾನ ನಮ್ಮ ತುಳುನಾಡಿನ ಶ್ರೇಷ್ಠ ಕಲೆ. ಇಂತಹ ಪರಿಪೂರ್ಣವಾದ ಕಲೆಯನ್ನು ಬೇರೆ ಯಾವ ಪ್ರದೇಶದಲ್ಲೂ ನಾನು ನೋಡಿಲ್ಲ. ಯಕ್ಷಗಾನ ಮೂಲಕ ನಾವು ಮಕ್ಕಳಿಗೆ ಧಾರ್ಮಿಕ ಶಿಕ್ಷಣ, ಸಂಸ್ಕಾರವನ್ನು ನೀಡುತ್ತಿದ್ದೇವೆ ಎಂದರು.

    ದಶಮಾನೋತ್ಸವ ಸಂಭ್ರಮದ ಅಧ್ಯಕ್ಷ ಬರೋಡಾ ಶಶಿಧರ್ ಶೆಟ್ಟಿ ಮಾತಾಡಿ, ನಾವು ದಶಮಾನೋತ್ಸವ ಸಂಭ್ರಮಕ್ಕೆ 10 ಕೋಟಿ ರೂ. ಒಟ್ಟುಗೂಡಿಸುವ ಉದ್ದೇಶ ಹೊಂದಿದ್ದೆವು ಆದರೆ ನಿರೀಕ್ಷೆಗೂ ಮೀರಿ 15 ಕೋಟಿ ರೂಪಾಯಿಗೂ ಹೆಚ್ಚು ಸಂಗ್ರಹಗೊಂಡಿದೆ. ಪಟ್ಲ ಫೌಂಡೇಶನ್ ನಿಂದ ಯಕ್ಷಗಾನ ಕಲಾವಿದರಿಗೆ ಇನ್ನಷ್ಟು ಸೇವಾ ಕಾರ್ಯಗಳು ನೆರವೇರಲಿ ಎಂದರು.

    ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಆಶೀರ್ವಚನ  ಮಾತುಗಳನ್ನಾಡಿ, ಜಿಲ್ಲೆಯ ಬೇರೆ ಬೇರೆ ರಂಗದ ಕಲಾವಿದರಿಗೆ ಆರೋಗ್ಯ, ಬಡ ಕಲಾವಿದರಿಗೆ ಆಶ್ರಯಕ್ಕೆ ಮನೆ, ಆಸರೆ ಎಲ್ಲವನ್ನೂ ಟ್ರಸ್ಟ್ ಒದಗಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಟ್ರಸ್ಟ್ ನ ಪದಾಧಿಕಾರಿಗಳು, ದಾನಿಗಳನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸುತ್ತೇನೆ  ಎಂದರು.

    ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಮಾತಾಡಿ, ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ. ಸತೀಶ್ ಪಟ್ಲ ಅವರು ಪ್ರಾರಂಭದಲ್ಲಿ ನನ್ನ ಬಳಿ ತೊಟ್ಟಿಲು ಕೇಳಿದಾಗ ನಾನು ಹಿಂದೆ ಮುಂದೆ ಯೋಚಿಸದೆ ಬೆಳ್ಳಿ ತೊಟ್ಟಿಲು ನೀಡಿದೆ. ಪಟ್ಲ ಫೌಂಡೇಶನ್ ನ ಸಮಾಜಮುಖಿ ಚಿಂತನೆ, ಕಾರ್ಯಗಳು ಹೀಗೆಯೇ ಮುಂದುವರಿಯಲಿ ಎಂದರು.

    ವೇದಿಕೆಯಲ್ಲಿ ಒಡಿಯೂರು ಮಠದ ಮಾತಾನಂದಮಯಿ, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಉದಯ ಕುಮಾರ್ ಶೆಟ್ಟಿ ಮುನಿಯಾಲ್, ಉದ್ಯಮಿ ಕಟೀಲು ದಿವಾಕರ್ ರಾವ್, ಸಂಜೀವಿನಿ ಆಸ್ಪತ್ರೆ ಮುಖ್ಯಸ್ಥ ಡಾ.ಸುರೇಶ್ ರಾವ್ ಕಟೀಲು, ಫೌಂಡೇಶನ್ ನ ಮಹಾದಾನಿ ಎಂ.ಎಲ್. ಸಾಮಗ ಉಡುಪಿ, ನಿಟ್ಟೆ ಯುನಿವರ್ಸಿಟಿಯ ಸತೀಶ್ ಭಂಡಾರಿ, ಕನ್ಯಾನ ರಘುರಾಮ ಶೆಟ್ಟಿ, ಸಿಎ ಸುಭಾಷ್ಚಂದ್ರ ಬೆಹರಿನ್, ಶ್ಯಾಮ್ ಪ್ರಸಾದ್, ಪಳ್ಳಿ ಕಿಶನ್ ಹೆಗ್ಡೆ, ಸಿಎ ಸುರೇಂದ್ರ ಶೆಟ್ಟಿ, ಪೆರ್ಮುದೆ ಅಶೋಕ್ ಶೆಟ್ಟಿ, ಪ್ರೊಫೆಸರ್ ಡಾ.ಮನು ರಾವ್, ಕೆರೆಕಟ್ಟೆ ಉದಯ ಶೆಟ್ಟಿ, ಪ್ರೀತಮ್ ಶೆಟ್ಟಿ, ವಕ್ವಾಡಿ ಪ್ರವೀಣ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ದುಬೈ ಘಟಕದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ತಲ್ಲೂರ್ ಶಿವರಾಮ ಶೆಟ್ಟಿ, ಬಿಬಿಎಂಪಿ ಅಪರ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ವೇಣುಗೋಪಾಲ್ ಶೆಟ್ಟಿ ಥಾಣೆ, ಬೆಳ್ಳಾಡಿ ಅಶೋಕ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ರವೀಂದ್ರ ನಾಥ್ ಭಂಡಾರಿ, ಶಶಿಧರ್ ಶೆಟ್ಟಿ ಇನ್ನಂಜೆ, ಗಿರೀಶ್ ಶೆಟ್ಟಿ ತೆಳ್ಳಾರ್, ಉಳ್ತೂರು ಮೋಹನ್ ದಾಸ್ ಶೆಟ್ಟಿ, ಪೆರಾರ ಬಾಬಣ್ಣ, ಪುತ್ತಿಗೆ ಮಠ ಯುಎಸ್ ಎ ಅರ್ಚಕ ಕಿರಣ್ ರಾವ್, ಗಿರೀಶ್ ಎಂ ಶೆಟ್ಟಿ ಕಟೀಲ್, ಸುಧಾಕರ ಎಸ್ ಪೂಂಜ ಸುರತ್ಕಲ್, ದಯಾನಂದ ಶೆಟ್ಟಿ ಆಸ್ಟ್ರೇಲಿಯಾ, ಡಾ.ಆರ್.ಕೆ.ಶೆಟ್ಟಿ, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಕೇಂದ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಕರುಣಾಕರ ರೈ ದೇರ್ಲ, ಚೆಲ್ಲಡ್ಕ ರಾಧಾಕೃಷ್ಣ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ದುರ್ಗಾಪ್ರಸಾದ್, ನಾಗಭೂಷಣ್, ಸವಣೂರು ಸೀತಾರಾಮ್ ರೈ, ಲಯನ್ ತಾರಾನಾಥ್ ಶೆಟ್ಟಿ ಬೋಳಾರ್, ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಕುಣಿತ ಭಜನಾ ಸ್ಪರ್ಧೆಯನ್ನು ಒಡಿಯೂರು ಕ್ಷೇತ್ರದ ಮಾತಾನಂದಮಯಿ ಉದ್ಘಾಟಿಸಿದರು. ಯಕ್ಷಗಾನ ಕ್ಷೇತ್ರದ ಸಾಧಕಿ ಆರ್ಷಿಯ ತನು ವಿಟ್ಲರನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿದರು. 2025ನೇ ಸಾಲಿನ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ-ಚಂದ್ರಿಕಾ ಹರೀಶ್ ಶೆಟ್ಟಿ ದಂಪತಿಗಳಿಗೆ ಪ್ರದಾನ ಮಾಡಲಾಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾ ಗೌರವ-2025 ಅನ್ನು ಅಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಈಶ್ವರ ಭಟ್, ಮಂಗಳೂರು ವಿವಿ ಮಾಜಿ ಕುಲಪತಿ ಪ್ರೊ. ಬಿ.ಎ. ವಿವೇಕ್ ರೈ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ನಿವೃತ್ತ ಯೋಧ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರ ಸುಳ್ಯ ಇದರ ಜೀವನ್ ರಾಮ್ ಸುಳ್ಯ ಅವರಿಗೆ ಪ್ರದಾನ ಮಾಡಲಾಯಿತು.ಕದ್ರಿ ನವನೀತ್ ಶೆಟ್ಟಿ, ಪೃಥ್ವಿ ಕಾರಿಂಜ ಕಾರ್ಯಕ್ರಮ ನಿರೂಪಿಸಿದರು. ರವಿಚಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 13, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    Local News September 12, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    Local News September 10, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    Local News September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Comments are closed.

    Demo
    Don't Miss
    Local News September 13, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    ಮಂಗಳೂರು, ಸೆ.13 : ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ಕಾಪಿಕಾಡ್ (ದೇವ್) ನಿರ್ದೇಶನ,…

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    September 12, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.