ಬಂಟ್ವಾಳ,ಜೂ.02.: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಮೇ. 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್ನಲ್ಲಿ ಶೃದ್ದಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ದ ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.