ಬೆಳ್ತಂಗಡಿ, ಜೂ. 08 : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಮುಂಡಾಜೆ ಸದಾಶಿವ ಶೆಟ್ಟಿ ಅವರು ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು.