ಅಹಮದಾಬಾದ್,ಜೂ. 14 : ಗುಜರಾತ್ನ ಅಹಮದಾಬಾದ್‌ನಿಂದ ಇಂಗ್ಲೆಂಡ್ (ಗ್ಯಾಟ್ವಿಕ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಜೂ. 12, ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿದೆ.ಅಹಮ್ಮದಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. 241 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ವರದಿಯಾಗಿದೆ.
ಪತನಗೊಂಡಿರುವ ಈ ವಿಮಾನದಲ್ಲಿ12 ಸಿಬ್ಬಂದಿ ಸೇರಿದಂತೆ 242 ಜನರು ಇದ್ದರು. ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಡಾಕ್ಟರ್ ಹಾಸ್ಟೆಲ್ನ ಒಳಗೆ ನುಗ್ಗಿದೆ. ಇದರಿಂದ ವಿಮಾನದಲ್ಲಿರುವ ಪ್ರಯಾಣಿಕರು ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತಿದೆ.