ಕುಂದಾಪುರ, ಜೂ. 17 : ಖಾಸಗಿ ಬಸ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಸಿಗಂದೂರು ನಿವಾಸಿ ಶರತ್(25) ಎಂದು ಗುರುತಿಸಲಾಗಿದೆ.
ಬಸ್ ಹೆಮ್ಮಾಡಿಯಿಂದ ಕೊಲ್ಲೂರು ಕಡೆಗೆ ಹೋಗುತ್ತಿದ್ದಾಗ, ವೇಗವಾಗಿ ಬಂದ ಬೈಕ್ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ರಸ್ತೆಗೆ ಬಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಶರತ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿ ಹೊತ್ತಿಕೊಂಡು ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.