ಮಂಗಳೂರು, ಜೂ.18 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ, ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ, ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಅಧಿಕಾರಿಯಾಗಿದ್ದಾರೆ. ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೆ ಮುಗಿಲನ್ ಅವರ ನೋಂದಣಿ ಮತ್ತು ಮುದ್ರಾಂಕದ ಐಜಿ ಅವರನ್ನು ನೇಮಿಸಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರ ಸ್ವರೂಪ ಟಿ.ಕೆ ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.