ಹೈದರಾಬಾದ್, ಜೂ. 30 : ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿ ನಡೆದಿದೆ.
ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ಸಿಲುಕಿದ್ದವರ ರಕ್ಷಿಸಿದ್ದಾರೆ.
ಘಟನಾ ಸ್ಥಳದಿಂದ ಆರು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ. ಇನ್ನು ಕೆಲ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.