ಶಿವಕಾಶಿ, ಜು. 01 : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಚಿನ್ನಕ್ಕಂಪಟ್ಟಿಯಲ್ಲಿ ಇಂದು ಮಂಗಳವಾರ ನಡೆದಿದೆ.
ಕಾರ್ಖಾನೆಯಲ್ಲಿ ಕಾರ್ಮಿಕರು ದಿನನಿತ್ಯದ ಕೆಲಸದಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಪರಿಣಾಮ ಅನೇಕರು ಗಾಯಗೊಂಡಿದ್ದಾರೆ. ಈ ಸ್ಥಳಕ್ಕೆ ತಲುಪಿದ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಗಾಯಾಳುಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಪಟಾಕಿ ಉತ್ಪಾದನಾ ಘಟಕಕ್ಕೆ ಆಗಮಿಸಿದ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.