ಉಡುಪಿ, ಜು.4 : ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಆರೋಪಿ ಶರಣ್ ಪಂಪ್ ವೆಲ್ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವುದಾಗಿ ದೂರಲಾಗಿದೆ. ಅದರಂತೆ ಆರೋಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 353(2) BNS ರಂತೆ ಪ್ರಕರಣ ದಾಖಲಾಗಿದೆ.