ಮಂಗಳೂರು, ಜುಲೈ 12: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆಯ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು.
ಈ ಕಾರ್ಯಕ್ರಮವು ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ತಾರೆಗಳು ಭಾಗವಹಿಸಿದ್ದರು.
ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ಮಾತನಾಡಿ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡುವ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಲಿದೆ. ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು.
ಕಾರ್ಯಕ್ರಮವನ್ನು ನಿರೂಪಕಿ ರೀನಾ ಡಿಸೋಜಾ ಅವರು ನಿರೂಪಿಸಿದರು.