ಬೆಂಗಳೂರು, ಜು. 14 : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87 ) ಅವರು ವಯೋ ಸಹಜ ಅನಾರೋಗ್ಯದಿಂದಾಗಿ ಸೋಮವಾರ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಸರೋಜಾ ದೇವಿ ಅವರು 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರ ತಂದೆ ಬೈರಪ್ಪ ತಾಯಿ ರುದ್ರಮ್ಮಾ. ಸರೋಜಾ ದೇವಿ ಅವರು ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು.
2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು.
ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ನಟಿಸಿದ್ದರು. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು.