ಮಂಗಳೂರು,ಜು. 30 : ಎಮ್.ಸಿ.ಸಿ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದ್ದು, ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ದಿನಾಂಕ 03.08.2025ರಂದು ತೆರೆಯಲಿದೆ ಎಂದು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಎಮ್.ಸಿ.ಸಿ. ಬ್ಯಾಂಕ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ, ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಅಧ್ಯಕ್ಷತೆ ವಹಿಸುವರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಹೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರಿನ ಶಾಸಕ ಶ್ರೀ ಗುರುರಾಜ್ ಗಂಟಿಹೊಳೆ ಅವರು ಮುಖ್ಯ ಅತಿಥಿಯಾಗಿರಲಿದ್ದಾರೆ. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರಿನ ಆಡಳಿತ ಧರ್ಮದರ್ಶಿ ಶ್ರೀ ಬಾಬು ಶೆಟ್ಟಿ, ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಶಿಯಲ್ ಸ್ಕೂಲ್, ಇದರ ಪ್ರಾಂಶುಪಾಲ ವಂದನೀಯ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಶ್ರೀ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ಕಾಪ್ಸಿ ನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ಶ್ರೀ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಶ್ರೀ ಮೋಬಿ ಪಿ.ಸಿ. ಇವರು ಗೌರವ ಅತಿಥಿಗಳಾಗಲಿದ್ದಾರೆ.
ಇದರ ಜೊತೆಗೆ, 09.08.2025ರಂದು ಬೆಳ್ಮಣ್ನಲ್ಲಿ 9ನೇ ಎಟಿಎಮ್, 10.08.2025ರಂದು ಸುರತ್ಕಲ್ನಲ್ಲಿ 10ನೇ ಎಟಿಎಮ್, 17.08.2025ರಂದು ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು ಉದ್ಘಾಟನೆ ಹಾಗೂ 11ನೇ ಎಟಿಎಮ್ ಉದ್ಘಾಟನೆ, 14.09.2025ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಮ್, 27.09.2025ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಮ್, ಮತ್ತು 05.10.2025ರಂದು 14ನೇ ಎಟಿಎಮ್ ಸಂತೆಕಟ್ಟೆಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಅವರು ಹೇಳಿದರು.