ಮೂಡುಬಿದಿರೆ, , ಆ. 02 : ಮಾನವ ಸಂಪನ್ಮೂಲದ ಸಂಪೂರ್ಣ ಬಳಕೆ ಆಗುವಂಥ ಶಿಕ್ಷಣ ಮಕ್ಕಳಿಗೆ ಲಭಿಸಿದಾಗ ಅವರು ಸ್ವಾವಲಂಬಿಯಾಗುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ಗುಂಡೂರಾವ್ ಅವರು ಶುಕ್ರವಾರ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ 15 ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2025ರ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು,
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ ಅವರು ಮಾತನಾಡುತ್ತಾ, ಉದ್ಯೋಗಾರ್ಥಿಗಳು ಉದ್ಯೋಗ ಕೇಳಿಕೊಂಡು ಕಂಪೆನಿಗಳ ಬಾಗಿಲು ತಟ್ಟದೆ ನಿಮ್ಮ ಕೌಶಲದಿಂದ ಕಂಪೆನಿಗಳೇ ನಿಮ್ಮನ್ನು ಕರೆದು ಕೆಲಸ ಕೊಡುವಂತಾಬೇಕಾಗಿದೆ ಅಂಥ ವ್ಯಕ್ತಿತ್ವ ನಿಮ್ಮದಾಗಲಿ ಎಂದರು.
ಶಾಸಕರಾದ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ,ಉದ್ಯೋಗ ಮೇಳ ವಿದ್ಯಾರ್ಥಿ ಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.
ಈ ಸಂದರ್ಭದಲ್ಲಿ ದುಬೈನ ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಸೌದಿ ಅರೇಬಿಯದ ಎಕ್ಸಪರ್ಟೈಸ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆಎಸ್ ಶೇಖ್ ಕರ್ನಿರೆ, ಬಿಗ್ ಬ್ಯಾಗ್ಸ್ ಇಂಟರ್ನ್ಯಾಷನಲ್ ಪ್ರೈವೆಟ್ ಲಿಮಿಟೆಡ್ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಶ್ ಕಾಮತ್, ರೋಹನ್ ಕಾರ್ಪೋರೇಶನ್ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹನ್ ಮೊಂತೇರೋ, ನೀವಿಯಸ್ ಸೊಲ್ಯೂಷನ್ಸ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಯೋಗ್ ಶೆಟ್ಟಿ ಇವರುಗಳನ್ನು ಸನ್ಮಾನಿಸಲಾ ಯಿತು,
ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಪ್ರಸ್ತಾವಿಸಿದರು. ಮಾಜಿ ಸಚಿವ ರಮಾನಾಥ್ ರೈ ಆಳ್ವಾಸ್ ಪ್ರಗತಿಯ ಅಭ್ಯರ್ಥಿಗಳಿಗೆ ಅನುಕೂಲವಾಗುವ ಎಐ ತಂತ್ರಜ್ಞಾನ ಆಧಾರಿತ ಆ್ಯಪ್ ಅನ್ನು ಶನಿವಾರ ಲೋಕಾರ್ಪಣೆಗೈದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ, ಮಾಜಿ ಸಚಿವ ರಮಾನಾಥ ರೈ,ಅಭಯ ಚಂದ್ರ ಜೈನ್,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ,ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಶ್ರೀಪತಿ ಭಟ್ ಮೊದಲಾದ ವರು ಉಪಸ್ಥಿತರಿದ್ದರು.