ಮಂಗಳೂರು, ಆ.09 : ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಆ.10ರಂದು ಬೆಳಿಗ್ಗೆ 11ಗಂಟೆಗೆ ನಗರದ ಜೆಪ್ಪಿನಮೊಗರಿನಲ್ಲಿರುವ ಪ್ರೆಸ್ಟಿಜ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಸ್ಕಾಲರ್ಶಿಪ್ ಕಮಿಟಿಯ ಚೇರ್ಮ್ಯಾನ್ ಎಂ.ಇ. ಮೂಳೂರು ಅವರು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ಕಲ್ಚರಲ್ ಫೋರಂ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿ ತನಕದ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು.
ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ. ಯೂಸುಫ್ ಮಾತನಾಡಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ದುಆಗೈಯಲಿದ್ದಾರೆ.;ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಐವನ್ ಡಿಸೋಜ, ಮಾಜಿ ಸಚಿವ ರಮಾನಾಥ ರೈ, ಸಂಸದ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧಿಕಾರಿ ಎಚ್.ವಿ. ದರ್ಶನ್, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ತುಂಬೆ ಗ್ರೂಪ್ನ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದಿನ್, ಯೆನೆಪೋಯ ವಿವಿಯ ಕುಲಾಧಿಪತಿ ಯೆನೆಪೋಯ ಅಬ್ದುಲ್ಲಾ ಕುಂಞಿ, ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್.ಧರ್ಮ, ಅಎನ್.ಆರ್.ಫೋರಂ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮಾಜಿ ಶಾಸಕರಾದ ಬಿ.ಎಂ.ಫಾರೂಕ್, ಬಿ.ಎ. ಮೊಯ್ದಿನ್ ಬಾವ, ಡಾ. ಯು.ಟಿ. ಇಫ್ತಿಕಾರ್, ಹಾಜಿ ಎಸ್.ಎಂ.ರಶೀದ್, ಕೆ.ಮುಹಮ್ಮದ್ ಹಾರಿಸ್. ಶೇಖ್ ಮೊಯ್ದಿನ್ ಕರ್ನಿರೆ, ಅಬ್ದುಲ್ಲಾ ಮಾದುಮೂಲೆ, ಇಬ್ರಾಹೀಂ ಗಡಿಯಾರ್, ಅಬೂಸಾಲಿಹ್, ಕೌಸರ್ ನಿಸಾರ್, ಝಾಹಿದಾ ಜಲೀಲ್ ಮತ್ತಿತರರು ಭಾಗವಹಿಸಲಿದ್ದಾರೆ. ಯುಎಇ ಲಂಡನ್ ಅಮೇರಿಕನ್ ಸಿಟಿ ಕಾಲೇಜಿನ ನಿರ್ದೇಶಕ ಡಾ. ಪ್ರೊ. ಕಾಪು ಮುಹಮ್ಮದ್ ಹಾಗೂ ಮನಾಲ್ ಕಾಪು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ನಡೆಸಿಕೊಡಲಿ ದ್ದಾರೆ. ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಸಿಎಫ್ ಉಪಾಧ್ಯಕ್ಷ ಅಬ್ದುಲ್ ಲತೀಫ್ ಮುಲ್ಕಿ, ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ, ಮುಖ್ಯ ಸಲಹೆಗಾರರಾದ ಇಬ್ರಾಹೀಂ ಗಡಿಯಾರ್, ಅಬೂಸ್ವಾಲಿಹ್ ಹುಸೈನ್, ಹನೀಫ್, ಯಾಕೂಬ್ ದೇವ, ಹಫೀಕ್ ಉಪಸ್ಥಿತರಿದ್ದರು.