ಮಂಗಳೂರು, ಆ.11 : ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು ಸೋಮರ್ ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮಂಗಳೂರಿನ ಲೇಡಿಹಿಲ್ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ.
ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ.
ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉಡುಪಿಯ ಈಜುಕೊಳದಲ್ಲಿ ಗುತ್ತಿಗೆ ಆಧಾರದಲ್ಲಿ ಲೈಫ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಮೂರು ವರ್ಷದ ಹಿಂದೆ ನಗರದ ಮಂಗಳೂರು ಮಹಾನಗರಪಾಲಿಕೆ ಈಜುಕೊಳದ ನಿರ್ವಹಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.