ಉಡುಪಿ, ಆ.25 : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತಿಮರೋಡಿ ಅವರನ್ನು ಅವರ ನಿವಾಸದಲ್ಲಿ ಬಂಧಿಸಲಾಗಿತ್ತು. ಹಿರಿಯ ಬಿಜೆಪಿ ನಾಯಕರ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ಇದೀಗ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.