ಮಂಗಳೂರು, ಆ. 26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನಡೆಯಿತು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಜತೆ ಸಂಘಧ ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನೆರವೇರಿಸಿದರು
ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದದಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ,ಸರಕಾರಿ ಯೋಜನೆ, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮಹತ್ಕಾರ್ಯವನ್ನು ಸರಕಾರಿ ನೌಕರರು ನಿರ್ವಹಿಸುತ್ತಿದ್ದಾರೆ.ಭವಿಷ್ಯವನ್ನು ನಿರ್ಮಾಣ ಮಾಡುವ ವಿದ್ಯಾರ್ಥಿಗಳಿಗೆ ವಿಶ್ವಾಸ ತುಂಬಿಸುವ ಕೆಲಸವನ್ನು ಸಂಘದಿಂದ ಮಾಡಲಾಗುತ್ತಿದೆ. ಸರಕಾರಿ ನೌಕರರ ಸಂಘದಿಂದ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯಲಿ ಹೇಳಿದರು.
ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು, ಸರಕಾರಿ ನೌಕರರು ಸಮಾಜಕ್ಕೆ ಕೊಡುಗೆ ನೀಡುವ ದೇಶಾಭಿಮಾನಿಗಳಾಗಿ ಹೊರಹೊಮ್ಮಬೇಕು. ಸಂಘದಿಂದ ನಡೆಯುವ ಇಂಥ ಸಮಾಜಮುಖಿ ಕಾರ್ಯ ಪ್ರಶಂಸನೀಯ ಎಂದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪುರಸ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಅಕ್ಷಯ ಗೋಖಲೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್. ಬಸವರಾಜ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್., ಉಡುಪಿ ಜಿಲ್ಲಾಧ್ಯಕ್ಷ ಕೆ. ದಿನಕರ ಶೆಟ್ಟಿ, ರಾಜ್ಯ ಸಂಘಟದ ಪ್ರಧಾನ ಕಾರ್ಯದರ್ಶಿ ಗಿರಿ ಗೌಡ ಎಚ್. ಮತ್ತಿತ್ತರರು ಉಪಸ್ಥಿತರಿದ್ದರು.